ರೈತ ವಿರೋಧಿ ಸರ್ಕಾರ ಕೇಂದ್ರದ ಬಿಜೆಪಿ ಸರ್ಕಾರ : ಸಂಯುಕ್ತ ಪಾಟೀಲ್.
ಹುನಗುಂದ:-ರಾಜ್ಯದ ಜನರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ರಾಜ್ಯದ ಮುಖ್ಯಮಂತ್ರಿಗಳಾದಿಯಾಗಿ ಎಲ್ಲ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ರಾಜ್ಯದ ಟ್ಯಾಕ್ಸ್ ಹಣ ಹಾಗೂ ಬರ ಪರಿಹಾರದ ಹಣದ ಕುರಿತು ಹೋರಾಟ ನಡೆಸಿದರು. ಆದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಸ್ಪಂದಿಸಿಲ್ಲ ಎಂದು ಕೈ ಅಭ್ಯರ್ಥಿ ಹುನಗುಂದ ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದರು.
ಹುನಗುಂದ ನಗರದಲ್ಲಿ ನಡೆದ ಸಭೆಯಲ್ಲಿ ಸಂಯುಕ್ತ ಪಾಟೀಲ್ ಪ್ರಚಾರ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯ ಹಲವಾರು ಮುಖಂಡರು ಪಕ್ಷ ಸೇರಿದರು.
ಈ ಸಮಯದಲ್ಲಿ ಶಾಸಕರಾದ ವಿಜಯಾನಂದ ಕಾಶಪ್ಪನವರ್ ಹಾಗೂ ಇತರೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.