ಪ್ರೀತಿಸಿ ಮದುವೆಯಾಗಿದ್ದ ದಂಪತಿ ಸುಸೈಡ್ .ನಾಲ್ಕು ತಿಂಗಳ ಹಿಂದೆ ಆದ ಮದುವೆ.
ವಿಜಯಪುರ: ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಹೊರಭಾಗ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಮನೋಜ್ ಕುಮಾರ್ ಪೋಳ (30) ಹಾಗೂ ರಾಖಿ (23) ಎಂದು ಗುರುತಿಸಲಾಗಿದೆ. ದಂಪತಿ ಮನೆಯಲ್ಲಿ ಇಬ್ಬರೇ ಇದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜ್ ಕುಮಾರ್ ತಾಯಿ ಭಾರತಿ ತಮ್ಮ ಮಗಳ ಮನೆಗೆ ಹೋಗಿದ್ದರು. ಇಂದು ಬೆಳಗ್ಗೆ ವಾಪಸ್ ಮನೆಗೆ ಬಂದು ನೋಡಿದಾಗ ಮಗ ಹಾಗೂ ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಜಲನಗರ ಪೋಲೀಸ ಠಾಣೆಯಲ್ಲಿ ದೂರು ದಾಖಲಾಗಿದ್ದು.ಆತ್ಮಹತ್ಯೆಗೆ ಕಾರಣ ಹುಡುಕುತ್ತಿರುವ ಪೋಲೀಸರು.