ತಪ್ಪಾಯಿತು ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ವಿಶ್ವ.ತಪ್ಪಾಯಿತು ಎಂದು.ನ್ಯಾಯಾಧೀಶರಿಗೆ ಕೈ ಮುಗಿದ ಅಂಜಲಿ ಹಂತಕ.
ಹುಬ್ಬಳ್ಳಿ:-ಅಂಜಲಿ ಹಂತಕ ವಿಶ್ವ ಅಲಿಯಾಸ ಗಿರೀಶನನ್ನು ಇಂದು ಸಿಐಡಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಸಂದರ್ಭದಲ್ಲಿ ತಪ್ಪಾಯಿತು ಎಂದು ನ್ಯಾಯಾಧೀಶರಿಗೆ ಕೈ ಮುಗಿದು ಕಣ್ಣೀರು ಹಾಕಿದ ಘಟನೆ ನಡೆಯಿತು.
ಹುಬ್ಬಳ್ಳಿಯ ಮೂರನೇ ಹೆಚ್ಚುವರಿ ದಿವಾಣಿ ನ್ಯಾಯಾಲಯದಲ್ಲಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಹಾಜರು ಪಡಿಸಿದ ಸಂದರ್ಭದಲ್ಲಿ ವಿಶ್ವ ಕಣ್ಣೀರು ಹಾಕಿದ ಘಟನೆ ನಡೆಯಿತು.
ಇದೇ ಸಂದರ್ಭದಲ್ಲಿ ಆರೋಪಿಯನ್ನು 15 ದಿನ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೇಳಿಕೊಂಡರು.ನಂತರ ವಿಚಾರಣೆ ನಡೆಸಿದ ನ್ಯಾಯಾಧೀಶರು 8 ದಿನಗಳವರೆಗೆ ಸಿಐಡಿ ವಶಕ್ಕೆ ನೀಡಿದರು.