ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್.ಚಾಲಕನ ಎರಡು ಕಾಲು ಕಟ್.. ನಾಲ್ಕು ಜನರ ಸ್ಥಿತಿ ಗಂಭೀರ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ
ರಾಮನಾಳ ಕ್ರಾಸ್ ಬಳಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಾಲಕನ ಎರಡೂ ಕಾಲುಗಳು ಕಟ್ಟಾಗಿ ನಾಲ್ವರ ಸ್ಥಿತಿ ಚಿಂತಾಜನಕವಾದ ಘಟನೆ ಜರುಗಿದೆ.
ಹುಬ್ಬಳ್ಳಿಯ ಯಿಂದ ಕುಮಟಾ ಗೆ ಹೋಗುತ್ತಿದ್ದ ಬಸ್ ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದರು.ರಾಮನಾಳ ಕ್ರಾಸ್ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ
ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.