ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ..! ಪ್ರಜ್ವಲ್ –ಸೂರಜ್ʼಗೆ ಸಿಗುತ್ತಾ ಜಾಮೀನು.!?

Share to all

ಬೆಂಗಳೂರು: ಕಾಕತಾಳೀಯ ಎಂಬಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆಯಲಿದೆ. ಈ ಸಹೋದರರ ಜಾಮೀನು ಕುರಿತಾದ ಆದೇಶ ಇಂದು ಪ್ರಕಟವಾಗಲಿದೆ. ಹೀಗಾಗಿ ಇಬ್ಬರಿಗೂ ಜಾಮೀನು ಸಿಗುತ್ತಾ ಎನ್ನುವುದು ಸದ್ಯದ ಪ್ರಶ್ನೆ.

ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಜೈಲು ಕಂಬಿ ಎಣಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ಅವರ ಜಾಮೀನು ಆದೇಶವನ್ನೂ ಕೋರ್ಟ್‌ ಇಂದೇ ಪ್ರಕಟಿಸಲಿದೆ. ಸೂರಜ್‌ ವಿರುದ್ಧ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ ಜಾಮೀನು ಕೋರಿ ಸೂರಜ್‌ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಅರ್ಜಿಗಳ ವಿಚಾರಣೆ ನಡೆದಿದ್ದು, ಕೋರ್ಟ್‌ ಆದೇಶ ಕಾಯ್ದಿರಿಸಿತ್ತು. ಹೀಗಾಗಿ ಸಹೋದರರ ಪಾಲಿಗೆ ಮುಖ್ಯ ದಿನ ಆಗಿದೆ.


Share to all

You May Also Like

More From Author