ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಈಗಾಗಲೇ 5 ದಿನಗಳಂತೆ ಎರಡು ಬಾರಿ ಈಗಾಗಲೇ ಇ.ಡಿ ಕಸ್ಟಡಿಗೆ ಪಡೆದಿತ್ತು. ಆದರೆ ಅಕ್ರಮದ ಬಗ್ಗೆ ಇ.ಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿಲ್ಲ. ಹೀಗಾಗಿ ಮತ್ತೆ ಕಷ್ಟಡಿಗೆ ಕೇಳಲು ಇಡಿ ಸಿದ್ಧತೆ ನಡೆಸಿತ್ತು.
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಬಂಧನವಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಒತ್ತಡ ಸೃಷ್ಟಿಯಾದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.