ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವೇ, ಈ ಬಾರಿಯ ಬಜೆಟ್ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪ್ರಸ್ತುತಪಡಿಸುವ ಬಗ್ಗೆ ಕೇಂದ್ರೀಕರಿಸುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಪ್ರಸ್ತುತ ಸರ್ಕಾರದ ಮುಂದೆ ಹಲವು ಸವಾಲುಗಳಿವೆ. ಬಳಕೆ ವೆಚ್ಚದಲ್ಲಿನ ಕೊರತೆಯನ್ನು ಸರಿದೂಗಿಸಲು,
ಹೆಚ್ಚಿನ ಸಾಮಾನ್ಯ ಜನರ ಕೈಯಲ್ಲಿ ಹಣಕಾಸು ಹರಿವು ಹೆಚ್ಚಿರುವಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಸರ್ಕಾರಕ್ಕಿದೆ. ಇದಕ್ಕಾಗಿ ಸರ್ಕಾರ ತೆರಿಗೆ ವಿನಾಯಿತಿ ನೀಡಬೇಕಾಗುತ್ತದೆ. ಕಾರ್ಪೊರೇಟ್ ಹೂಡಿಕೆಗೆ ಸ್ಥಿರತೆಯನ್ನು ತರುವುದು ಸರ್ಕಾರಕ್ಕೆ ಮತ್ತೊಂದು ಪ್ರಮುಖ ಸವಾಲಾಗಿದೆ. ಏಕೆಂದರೆ ಹೂಡಿಕೆಯು ಉದ್ಯೋಗಾವಕಾಶಗಳನ್ನು ಸಹ ಸೃಷ್ಟಿಸುತ್ತದೆ. ಪ್ರತಿಯೊಂದು ಕ್ಷೇತ್ರವೂ ಬಜೆಟ್ನಿಂದ ನಿರೀಕ್ಷೆಗಳನ್ನು ಹೊಂದಿದೆ. ಹೀಗಿರುವಾಗ ಇಂದು ವಿತ್ತ ಸಚಿವರು ಏನು ಉಡುಗೊರೆ ನೀಡುತ್ತಾರೋ ಎಂದು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ.