ಕೃಷಿ ಕ್ಷೇತ್ರಕ್ಕೆ ಬಜೆಟ್‌ʼನಲ್ಲಿ ಬಂಪರ್‌ ಗಿಫ್ಟ್‌ ಕೊಟ್ಟ ನಿರ್ಮಲಾ ಸೀತಾರಾಮನ್!

Share to all

ನವದೆಹಲಿ: ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಹೌದು  ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇನ್ನೂ ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿರುವಂತೆ ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದೇವೆ, ಭರವಸೆಯನ್ನು ಈಡೇರಿಸಿದ್ದೇವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯು 5 ವರ್ಷಗಳವರೆಗೆ ಕನಿಷ್ಠ 50% ಮಾರ್ಜಿನ್ ವೆಚ್ಚದಲ್ಲಿ 80 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ


Share to all

You May Also Like

More From Author