ಹೋರಾಟದ ಮೂಲಕ ನಮ್ಮ ಮೀಸಲಾತಿ ಪಡದೇ ತಿರುತ್ತೇವೆ; ಸರ್ಕಾರಕ್ಕೆ ಜಯಮೃತ್ಯಂಜಯ ಸ್ವಾಮೀಜಿ ವಾರ್ನ್.
ಹುಬ್ಬಳ್ಳಿ: ಅಕ್ಟೋಬರ್ 13 ರಂದು ಪಂಚಮಸಾಲಿ 2A ಮೀಸಲಾತಿ ೬ನೇ ಹಂತದ ಸಮಾವೇಶ ಇದೆ.
ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಯಾತ್ರೆ ಆರಂಭವಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಈಗ ಧಾರವಾಡ ಜಿಲ್ಲೆಯ ಸಮಾವೇಶ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಮೈದಾನದಲ್ಲಿ ಮಾಡಲಾಗುತ್ತದೆಂದು
ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು,
2A ಮೀಸಲಾತಿ, ಲಿಂಗಾಯತ ಉಪ ಪಂಗಡಗಳಿಗೆ ಕೇಂದ್ರದಿಂದ ಓಬಿಸಿ ದರ್ಜೆ, ವಿವಿಧ ಬೇಡಿಕೆಗಳನ್ನು ಇಟ್ಟು ಹೋರಾಟ ಆರಂಭ ಮಾಡಲಾಗಿದೆ. ಸಮಾವೇಶ ನಡೆಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆಗೆ ಸಲ್ಲಿಸಲಿರುವ ಸ್ವಾಮೀಜಿ.
2A ಮೀಸಲಾತಿ, ಲಿಂಗಾಯತ ಉಪ ಪಂಗಡಗಳಿಗೆ ಕೇಂದ್ರದಿಂದ ಓಬಿಸಿ ದರ್ಜೆ ನೀಡಲು ಮೂರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ಸರ್ಕಾರ ಕೊನೆಯ ಗಳಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಲಾಯಿತು.
ಚುನಾವಣೆ ಘೋಷಣೆ, ನೀತಿ ಸಂಹಿತೆಯಿಂದ ಮೀಸಲಾತಿ ಜಾರಿ ಆಗಲಿಲ್ಲ. ಕಾನೂನು ತೊಡಕು ಆಯಿತು. ಈಗಿನ ಸರ್ಕಾರಕ್ಕೆ ಸಹ ನಾವು ಕೇಳತಾ ಇದ್ದೇವೆ ನಮ್ಮ ಹಕ್ಕು ಕೊಡಿ ಅಂತಾ. ಹೋರಾಟದ ಮೂಲಕ ನಮ್ಮ ಮೀಸಲಾತಿ ಪಡದೇ ತಿರುತ್ತೇವೆ. ಸರ್ಕಾರ ನಮ್ಮನ್ನ ಕರೆದು ಮಾತುಕತೆಗೆ ಕರೆಯಬೇಕು ಎಂದರು.
ಉದಯ ವಾರ್ತೆ ಹುಬ್ಬಳ್ಳಿ