ಬೆಂಗಳೂರು:- ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಏನದು ಗುಡ್ ನ್ಯೂಸ್ ಅಂತೀರಾ ಸ್ಟೋರಿ ಓದಿ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ತಿಂಗಳುಗಳೇ ಉರುಳಿದೆ. ಚಂದನವನದ ನಟರು ಕೇಂದ್ರ ಕಾರಾಗೃಹಕ್ಕೆ ತೆರಳಿ ದರ್ಶನ ಅವರನ್ನು ಭೇಟಿಯಾಗಿ ಬರುತ್ತಿದ್ದಾರೆ. ಈ ಮಧ್ಯೆ ನಟ ದರ್ಶನ ಅವರ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು, ಅಭಿಮಾನಿಗಳಿಗೆ ಸಂತೋಷವಾಗಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು ಭೇಟಿಯಾಗಿ ಮಾತಾಡುವೆ ಎಂದು ಹೇಳಿದರು.
ಮಂಗಳವಾರ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿ ಭಾಷಣದ ವೇಳೆ ನಟ ದರ್ಶನ ಅಭಿಮಾನಿಗಳು ಡಿ ಬಾಸ್, ಡಿ ಬಾಸ್ ಎಂದು ಕೂಗಲು ಆರಂಭಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್, ನಟ ದರ್ಶನ ಪತ್ನಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು ಭೇಟಿಯಾಗಿ ಮಾತಾಡುವೆ ಎಂದು ತಿಳಿಸಿದರು.
ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲಾ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದರು.
ಅದರಂತೆ ಚಿತ್ರನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಇಂದು ತಮ್ಮ ಮೈದುನ ದಿನಕರ್ ಜೊತೆ ನಗರದ ಸದಾಶಿವನಗರದಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದರು. ದರ್ಶನ್ ನ್ಯಾಯಾಂಗ ಕಸ್ಟಡಿಯನ್ನು ನ್ಯಾಯಾಲಯವು ಆಗಸ್ಟ್ 1 ರವರೆಗೆ ವಿಸ್ತರಿಸಿದೆ. ಅವರೊಂದಿಗೆ ನಗರದ ಕೇಂದ್ರೀಯ ಕಾರಾಗೃಹದಲ್ಲಿರುವ ಇತರ 12 ಆರೋಪಿಗಳ ನ್ಯಾಯಾಗ ಕಸ್ಟಡಿಯನ್ನು ಸಹ ಅದೇ ತಾರೀಖಿನವರೆಗೆ ವಿಸ್ತರಿಸಲಾಗಿದೆ. ವಿಜಯಲಕ್ಷ್ಮಿ ಮತ್ತು ದಿನಕರ್ ಉಪ ಮುಖ್ಯಮಂತ್ರಿಯ ಜೊತೆ ಏನು ಮಾತಾಡಲಿದ್ದಾರೆ ಅನ್ನೋದು ಕುತೂಹಲಕಾರಿ ಸಂಗತಿಯಾಗಿದೆ