ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ: ಕೊಲೆ ಆರೋಪಿ ಎಸ್ಕೇಪ್!

Share to all

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ಕ್ರೈಂ ಕೇಸ್ ಗಳ ಹೆಚ್ಚಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆಲ್ಲಾ ಹತ್ಯೆ ಮಾಡಲಾಗುತ್ತಿದೆ. ಹೀಗಾಗಿ ಸಿಲಿಕಾನ್ ಸಿಟಿ ಈಗ ಕ್ರೈಂ ಸಿಟಿಯಾಗಿ ಬದಲಾದಂತೆ ಭಾಸವಾಗುತ್ತಿದೆ. ಇದೇ ರೀತಿ  ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಯಲ್ಲಿಈ ಘಟನೆ ನಡೆದಿದೆ. 24 ವರ್ಷದ ಕೃತಿ ಕುಮಾರಿ‌ ಮೃತ ಯುವತಿ. ರಾತ್ರಿ 11.10ರಿಂದ 11.30ರ ಸುಮಾರಿಗೆ ಈ ಹತ್ಯೆ ನಡೆದಿದೆ.

ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೋರಮಂಗಲದ ವಿಆರ್ ಲೇಔಟ್ ನ ಪಿಜಿಯಲ್ಲಿ ವಾಸವಾಗಿದ್ದರು.ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ತೀವ್ರ ಗಾಯಗೊಂಡ ಕೃತಿ ಕುಮಾರಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಳಿಕ ಯುವಕ ಪರಾರಿಯಾಗಿದ್ದಾನೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದೆ ಪಿಜಿ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಧಾವಿಸಿ ಮಾಹಿತಿ ಕಲೆ ಹಾಕಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ.


Share to all

You May Also Like

More From Author