ಕಲಬುರಗಿ: ಇಡೀ ನಾಗರಿಕ ಸಮಾಜವೇ ಇದೀಗ ತಲೆ ತಗ್ಗಿಸುವಂತಹ ಘಟನೆಗೆ ನಮ್ಮ ಜಿಲ್ಲೆ ಸಾಕ್ಷಿಯಾಗಿದೆ. ಹೌದು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಮಗುವಿನ ಮೇಲೆ ವಿಕೃತಿ ಮೇರೆದ ಕುರುಹುಗಳು ಪತ್ತೆಯಾಗಿದ್ದು, ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.