ಕೊಲ್ಲೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಮರ್ಡರ್ ಕೇಸ್ನಲ್ಲಿ ಎ2 ಆಗಿರುವ ದರ್ಶನ್ ಅವರು ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ನಡುವೆ ಗಂಡನ ಕಾಪಾಡಲು ಪತ್ನಿ ವಿಜಯಲಕ್ಷ್ಮಿ ಅವರು ಕೊಲ್ಲೂರಿಗೆ ತೆರಳಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿದ್ದಾರೆ. ಆಪ್ತರ ಜೊತೆ ಕೊಲ್ಲೂರಿಗೆ ಆಗಮಿಸಿರುವ ವಿಜಯಲಕ್ಷ್ಮಿ ಅವರು ಮೂಕಾಂಬಿಕಾ ದೇವಿಯ ವಿಶೇಷ ದರ್ಶನ ಪಡೆದಿದ್ದಾರೆ. ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋಗಿರುವ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಂಕಲ್ಪ, ಪಾರಾಯಣ ಮಾಡುತ್ತಿದ್ದಾರೆ. ದೇವಸ್ಥಾನದಲ್ಲಿ ಇಂದು ಬೆಳಗ್ಗೆ ದರ್ಶನ್ಗಾಗಿ ನವ ಚಂಡಿಕಾಯಾಗ ಕೂಡ ನಡೆಯುತ್ತಿದೆ.