ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಸಂಕಷ್ಟಗಳ ಸರಮಾಲೆಯೇ ಎದುರಾಗಿದೆ. ಇವತ್ತು ಕೋರ್ಟ್ ಕೂಡ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪೊಲೀಸರು ಕೊಲೆ ಪ್ರಕರಣದ ಚಾರ್ಜ್‌ಶೀಟ್ ರೆಡಿ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆಯಾಗಿ ಒಂದುವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಹಿರಿಯ ನಟ ವಿನೋದ್ ರಾಜ್ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದು,
ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು ನೀಡಿದ್ದಾರೆ. ಮೃತ ರೇಣುಕಾಸ್ವಾಮಿ ನಿವಾಸಕ್ಕೆ ತೆರಳಿ ಪೋಷಕರಿಗೆ ಮತ್ತು ರೇಣುಕಾಸ್ವಾಮಿ ಪತ್ನಿ ಸಹನಾಗೆ ವಿನೋದ್ ರಾಜ್ ಸಾಂತ್ವಾನ ಹೇಳಿದ್ದಾರೆ. ನಿಮ್ಮ ಮಗ ಮರಳಿ ಬರಲಿ ಅಂತ ಹಾರೈಸಿದ್ದಾರೆ.