ಆಂಧ್ರಪ್ರದೇಶ:- ಆಂಧ್ರಪ್ರದೇಶದ ವಿಜಯವಾಡದಲ್ಲಿ ಗ್ಯಾಸ್ ಸೋರಿಕೆಯಾಗಿ ಆಟೋ ಸ್ಫೋಟಗೊಂಡಿರುವ ಘಟನೆ ಜರುಗಿದೆ. ಪರಿಣಾಮ ಕೆಲ ಹೊತ್ತಿನಲ್ಲೇ ಆಟೋ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇಲ್ಲಿನ ಪಿವಿಪಿ ಮಾಲ್ ಎದುರು ನಿಂತಿದ್ದ ಆಟೋದಲ್ಲಿ ಭಾರೀ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆಟೋ ಸ್ಫೋಟದ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಂಪೂರ್ಣ ವಿವರ ತಿಳಿಯಬೇಕಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.