ಶಿವಮೊಗ್ಗ: ಬಿಟ್ಟು ಬಿಡದೇ ಸುರಿಯುತ್ತಿರುವ ಮಹಾ ಮಳೆಗೆ ಯುವಕ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿಯ ಮೀನ್ಮನೆಕೊಪ್ಪ ಎಂಬಲ್ಲಿ ನಡೆದಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ (26) ಎಂಬ ಯುವಕ ಸಾವನ್ನಪ್ಪಿದ್ದಾರೆ.
ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದ ರಾಮಪ್ಪ ವಾಪಸ್ ಆಗುವಾಗ ಚಲಿಸುತ್ತಿರುವ ಬೈಕ್ ಮೇಲೆ ಆಕೇಶಿಯ ಮರವೊಂದು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮಪ್ಪ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.