ಡೆಂಘೀ ಜ್ವರಕ್ಕೆ ಐದು ವರ್ಷದ ಬಾಲಕಿ ಬಲಿ.ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಪೂರ್ಣಾ ಸಾವು..
ಹುಬ್ಬಳ್ಳಿ:- ಡೆಂಘೀ ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ನಿನ್ನೆ ತಡ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಐದು ವರ್ಷದ ಬಾಲಕಿ ಪೂರ್ಣಾ ಎಂಬುವಳೇ ಸಾವನ್ನಪ್ಪಿದ್ದಾಳೆ.ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕಿ..ತೀವೃ ಜ್ವರದಿಂದ ಬಳಲುತ್ತಿದ್ದಳು.
ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ..
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಬಾಲಕಿಯ ಸಾವಾಗಿದೆ.