ವಿದ್ಯುತ್ ಅವಘಡ: ಮೊಬೈಲ್ ಚಾರ್ಜ್ ಮಾಡುವ ವೇಳೆ ಕರೆಂಟ್ ಹೊಡೆದು 9 ವರ್ಷದ ಬಾಲಕಿ ಸಾವು!

Share to all

ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ. 9 ವರ್ಷದ ಅಂಜಲಿ ಕಾರ್ತಿಕಾ ಮೃತ ಬಾಲಕಿ ಎಂದು ಹೇಳಲಾಗಿದೆ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ. ನಿನ್ನೆ ಈ ದಾರುಣ ಘಟನೆ ನಡೆದಿದೆ.

ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ


Share to all

You May Also Like

More From Author