ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್ ಫೈಟ್: 8ನೇ ಬಾರಿ ಏಷ್ಯಾಕಪ್‌ ಗೆಲ್ಲುವ ವಿಶ್ವಾಸದಲ್ಲಿ ಭಾರತ!

Share to all

ಭಾರತ 8ನೇ ಬಾರಿ ಮಹಿಳಾ ಏಷ್ಯಾಕಪ್ ಗೆಲ್ಲಲು ಸಜ್ಜಾಗಿದ್ದರೆ, ಶ್ರೀಲಂಕಾ ಮೊದಲ ಬಾರಿ ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಏಷ್ಯಾಕಪ್‌ನಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಫೈನಲ್‌ನಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷಿಸಲಾಗಿದೆ.

ಮೊದಲ ಸೆಮಿಫೈನಲ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದರೆ, ಅತ್ತ ಶ್ರೀಲಂಕಾ ತಂಡವು ಎರಡನೇ ಸೆಮಿಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ 3 ವಿಕೆಟ್​ಗಳ ಗೆಲುವು ದಾಖಲಿಸಿ ಅಂತಿಮ ಹಂತಕ್ಕೇರಿದೆ. ಅದರಂತೆ ಇಂದು ನಡೆಯಲಿರುವ ಪ್ರಶಸ್ತಿ ಸುತ್ತಿನಲ್ಲಿ ಏಷ್ಯಾದ ಬಲಿಷ್ಠ ಮಹಿಳಾ ತಂಡಗಳು ಮುಖಾಮುಖಿಯಾಗಲಿದೆ.

ಮಹಿಳಾ ಏಷ್ಯಾಕಪ್ ಶುರುವಾದಾಗಿಂದ ಭಾರತ ತಂಡವು ಪ್ರತಿ ಬಾರಿ ಫೈನಲ್ ಆಡಿದೆ. ಈ ವೇಳೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಇನ್ನು 2018 ರಲ್ಲಿ ಬಾಂಗ್ಲಾದೇಶ್ ವಿರುದ್ಧ ಮುಗ್ಗರಿಸುವ ಮೂಲಕ ಒಂದು ಬಾರಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ 9ನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿರುವ ಟೀಮ್ ಇಂಡಿಯಾ ಈ ಸಲ ಕೂಡ ಟ್ರೋಫಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 2.30 ಕ್ಕೆ ನಡೆಯಲಿದೆ.

ಫೈನಲ್ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ಇರಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ ಮೂಲಕ ಕೂಡ ಈ ಪಂದ್ಯವನ್ನು ಲೈವ್ ವೀಕ್ಷಿಸಬಹುದು.


Share to all

You May Also Like

More From Author