BJP ಯ ಮತ್ತೊಂದು ವಿಕೆಟ್ ಪತನ – ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿಂದ ಮಾಸ್ಟರ್ ಸ್ಟ್ರೋಕ್

Share to all

BJP ಯ ಮತ್ತೊಂದು ವಿಕೆಟ್ ಪತನ – ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿಂದ ಮಾಸ್ಟರ್ ಸ್ಟ್ರೋಕ್ ಕಮಲ ಬಾರ ಇಳಿಸಿ ಕೈ ಬಾರ ಹೊತ್ತುಕೊಂಡ ಶಾಸಕ

ಬೆಂಗಳೂರು –

ರಾಜ್ಯದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದ್ದು ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೇಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.ಹೌದು ಬಿಜೆಪಿ-ಜೆಡಿಎಸ್‌ ಮೈತ್ರಿ ಘೋಷಣೆಯಾದ ಬಳಿಕ ಹಲವು ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಕಡೆ ಮುಖ ಮಾಡ್ತಿದ್ದಾರೆ. ಸಧ್ಯ ಬಿಜೆಪಿ ಮುಖಂಡ ಮಾಜಿ ಶಾಸಕ ರಾಮಪ್ಪ ಲಮಾಣಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದಾರೆ. ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದು ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ ಎಂದು ರಾಮಣ್ಣ ಲಮಾಣಿ ಹೇಳಿದರು. ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗಾಗಿ ಇನ್ನೂ ಗಾಳವನ್ನು ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ ಅಂತ ರಾಮಪ್ಪ ಹೇಳಿದ್ದಾರೆ. ಶಿವಕುಮಾರ್‌ ಮಾತನಾಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಬೋದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ದೊಡ್ಡ ಪಟ್ಟಿಯನ್ನ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿ ನನ್ನ ಬಳಿ ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಬಳಿ ಇವೆ. ಆ ಹೆಸರುಗಳನ್ನು ಈಗಲೇ ರಿವೀಲ್‌ ಮಾಡೋದಿಲ್ಲ ಅಂತ ಹೇಳಿ ಎರಡು ಪಕ್ಷಗಳದ ನಾಯಕರಿಗೆ ಶಾಕ್ ನೀಡಿದ್ದಾರೆ.

ಉದಯ ವಾರ್ತೆ ಬೆಂಗಳೂರು


Share to all

You May Also Like

More From Author