ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಹೌದು ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.
ಎರಡು ವರ್ಷಗಳ ನಂತರ ಹಳೇ ಮೈಸೂರ ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದಾರೆ. ಸಿಎಂ, ಡಿಸಿಎಂಗೆ ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕಾಂಗ್ರೆಸ್ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ತನ್ವೀರ್ ಸೇಠ್, ರವಿಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.