ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಆರೋಪ

Share to all

ಮೈಸೂರು: ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ, ಇಲ್ಲದ ಹಗರಣವನ್ನ ಸೃಷ್ಟಿ ಮಾಡುತ್ತಿದೆ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ, ಇಲ್ಲದ ಹಗರಣವನ್ನ ಸೃಷ್ಟಿ ಮಾಡುತ್ತಿದೆ. ಅವರಿಗೆ ಯಾವು ಐಡಿಯಾಲಾಜಿ ಇಲ್ಲ, ಯಾವತ್ತೂ ನ್ಯಾಯಪರವಾಗಿಲ್ಲ. ಮುಡಾ ಹಗರಣವನ್ನ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇನೆ.

ಇದಕ್ಕಿಂತ ಇನ್ನೇನು ಬೇಕು ಹೇಳಿ? ನ್ಯಾಯಾಂಗ ತನಿಖೆಯನ್ನ ಕೇಂದ್ರ ಸಚಿವರು ಅನುಮಾನದಿಂದ ನೋಡಿದರೇ ಅದರಲ್ಲಿ ಅರ್ಥ ಇದ್ಯಾ? ಇವರ ಅವಧಿಯಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಗೊತ್ತಾ? ಒಂದು ಪ್ರಕರಣವನ್ನಾದರೂ ನ್ಯಾಯಾಂಗ ತನಿಖೆ ಮಾಡಿಸಿದ್ದಾರಾ? ಕೋವಿಡ್ ಸಮಯದಲ್ಲಿ 4,000 ಕೋಟಿ ನುಂಗಿದರು. ಅದನ್ನ ತನಿಖೆ ಮಾಡಿದ್ರಾ? ನಾನು ಬಂದ ಮೇಲೆ ಏಳೆಂಟು ಹಗರಣ ಸಿಬಿಐಗೆ ಕೊಟ್ಟಿದ್ದೇನೆ. ಇವರ ಅವಧಿಯಲ್ಲಿ ಒಂದಾದ್ರು ಸಿಬಿಐಗೆ ಕೊಟ್ಟಿದ್ದಾರಾ ಅಂತ ಪ್ರಶ್ನೆ ಮಾಡಿದರು.


Share to all

You May Also Like

More From Author