ರಾಜ್ಯಕ್ಕೆ ಕಾದಿದ್ಯಾ ಗಂಡಾಂತರ!?, ಅಚ್ಚರಿ ಭವಿಷ್ಯ ನುಡಿದ ಕೋಡಿಶ್ರೀ!

Share to all

ಬೆಳಗಾವಿ : ರಾಜ್ಯಕ್ಕೆ ಕಾದಿದ್ಯಾ ಗಂಡಾಂತರ, ನಿಜಕ್ಕೂ ಕೋಡಿಶ್ರೀ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಕಳೆದ ಇಪ್ಪತ್ತು ದಿನದ ಹಿಂದೆ ನಾನು ಧಾರವಾಡದಲ್ಲಿ ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜ್ಜಿನುಗಳು ಹೆಚ್ಚಾಗುತ್ತವೆ ಅಂತಾ ಹೇಳಿದ್ದೆ ಎಂದು ಕೋಡಿಮಠದ ಶ್ರೀ ಶಿವಯೋಗಿ ರಾಜೆಂದ್ರ ಸ್ವಾಮಿ ಹೇಳಿದರು.

ಇದು ಇಂಡಿಯಾ ಅಂತ ಅಷ್ಟೇ ಹೇಳಿರಲಿಲ್ಲ ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತಾ ಹೇಳಿದ್ದೆ ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತೆ ಬಳಿಕ ಬೇರೆ ಭಾಗಕ್ಕೆ ಹೋಗುತ್ತೆ ಇದು ಕ್ರೋಧಿನಾಮ ಸಮಸ್ತರ,ಕ್ರೋಧ ಅಂದರೆ ಸಿಟ್ಟು ಇದರಲ್ಲಿ ಒಳ್ಳೆಯದು ಕೆಟ್ಟದ್ದು ಇದೆ ಆ ಪೈಕಿ ಕೆಟ್ಟದ್ದೆ ಜಾಸ್ತಿ ಇರುತ್ತೆ ಎಂದರು.

ಇನ್ನೂ ರಾಜ್ಯ ರಾಜಕಾರಣದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಒಬ್ಬ ಸನ್ಯಾಸಿ ತಪಸ್ಸಿಗೆ ಕುಳಿತಿದ್ದನಂತೆ. ಅದೇ ವೇಳೆ ಒಬ್ಬ ಬೇಡ ಜಿಂಕೆಯನ್ನು ಅಟ್ಟಿಸಿಕೊಂಡು ಬಂದನಂತೆ. ಸನ್ಯಾಸಿ ಬಳಿ ಬಂದು, ‘ಏನ್ ಸ್ವಾಮಿ ಇಲ್ಲಿ ಜಿಂಕೆ ಓಡಿಹೋಯಿತೇ’ ಎಂದು ಪ್ರಶ್ನಿಸಿದನಂತೆ. ಸನ್ಯಾಸಿ ಉಭಯ ಸಂಕಟಕ್ಕೆ ಬಿದ್ದ. ಹೌದು ಎಂದರೆ ಜಿಂಕೆಯನ್ನು ಕೊಲ್ಲುವಂತೆ ಮಾಡಿದ ಪಾಪ ಬರುತ್ತದೆ. ಅಲ್ಲ ಎಂದರೆ ಸುಳ್ಳಾಡಿದ ಪಾಪ ಬರುತ್ತದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಆತ, ‘ಯಾವುದು ನೋಡಿತೋ ಅದು ಮಾತನಾಡಲ್ಲ. ಯಾವುದು ಮಾತನಾಡುತ್ತದೆಯೋ ಅದು ನೋಡಿಲ್ಲ’ ಎಂದನಂತೆ. ಕಣ್ಣು ನೋಡುತ್ತದೆ ಆದರೆ ಮಾತನಾಡಲ್ಲ. ಬಾಯಿ ಮಾತನಾಡುತ್ತದೆ ಆದರೆ ನೋಡಲ್ಲ ಎಂದರು

ಇದೇ ರೀತಿ ಈ ರಾಜಕಾರಣಿಗಳ ವಿಚಾರ ಮಾತನಾಡುವಾಗಲೂ ನಾವು ಬಹಳ ಎಚ್ಚರದಿಂದ ಇರಬೇಕು ಎಂದು ಅವರು ಹೇಳಿದರು. ರಾಷ್ಟ್ರ ರಾಜಕಾರಣದ ಬಗ್ಗೆಯೂ ತಾವು ಹಿಂದೆ ನುಡಿದಿದ್ದ ಭವಿಷ್ಯವನ್ನು ನೆಪಿಸಿಕೊಂಡರು. ಮಹಾಭಾರತದ ಚಕ್ರವ್ಯೂಹದ ಕಥೆಯನ್ನು ಉಲ್ಲೇಖಿಸಿ ಒಂದು ವಿಚಾರ ಹೇಳಿದ್ದೆ. ವೀರನಾಗಿದ್ದ ಅಭಿಮನ್ಯುವನ್ನು ಕರ್ಣ ಎಲ್ಲ ಸೇರಿ ಮೋಸದಿಂದ ಕೊಂದಿದ್ದರು. ಮಹಾಭಾರತದಲ್ಲಿ ಕೃಷ್ಣ ಇದ್ದ ಅಂತ ಭೀಮ ಗೆದ್ದ, ದುರ್ಯೋಧನ ಸೋತ. ಇಲ್ಲಿ ಕೃಷ್ಣ ಇಲ್ಲ. ದುರ್ಯೋಧನ ಗೆಲ್ಲುತ್ತಾನೆ, ಭೀಮ ಸೋಲುತ್ತಾನೆ ಎಂದಿದ್ದೆ ಎಂದು ಅವರು ನೆನಪಿಸಿಕೊಂಡರು.


Share to all

You May Also Like

More From Author