ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲ; ಜಿ.ಟಿ. ದೇವೇಗೌಡ ಆರೋಪ…
ಧಾರವಾಡ:-ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೋಳೆಯುವಂತಾಗಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಆರೋಪಿಸಿದ್ರು…ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ವ್ಯಯಿಸಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ತೀವ್ರ ಬರಗಾಲದಿಂದ ರೈತರು ರೋಸಿ ಹೋಗಿದ್ದಾರೆ…ಪ್ರತಿಯೊಂದು ವಿಷಯದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡುತ್ತಿರುವ ರಾಜ್ಯ ಸರ್ಕಾರ, ಹಣ ಕೊಟ್ಟು ವಿದ್ಯುತ್ ಖರೀದಿ ಮಾಡೋದು ಬಿಟ್ಟು ಜವಾಬ್ದಾರಿ ಇಲ್ಲದೇ ಆಡಳಿತ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ರೈತ ವಿರೋಧಿ, ಜನ ವಿರೋಧಿ ಆಡಳಿತವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನೀಡುತ್ತಿದ್ದು, ಸರ್ಕಾರದ 6ನೇ ಭಾಗ್ಯ ರೈತ ಆತ್ಮಹತ್ಯೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ..ಅಲ್ಲದೆ ತೀವ್ರ ಬರಗಾಲದಿಂದ ರೈತರು ರೋಸಿ ಹೋಗಿದ್ದಾರೆ. ವಿದ್ಯುತ್ ಇಲ್ಲದೇ ಬೆಳೆ ಹಾನಿ ಆಗಿದೆ. ಹಣ ಕೊಟ್ಟು ವಿದ್ಯುತ್ ಖರೀದಿ ಮಾಡೋದು ಬಿಟ್ಟು ಕೇಂದ್ರ ವಿರುದ್ಧ ಬೊಟ್ಟು ಮಾಡುತ್ತಿದೆ. ರೈತ ವಿರೋಧಿ ಆಡಳಿತ ನಡೆಸುತ್ತಿದ್ದು 6ನೇ ಭಾಗ್ಯ ರೈತ ಆತ್ಮಹತ್ಯೆ ಎನ್ನುವ ಪರಿಸ್ಥಿತಿ ಬಂದಿದೆ. ಕೇವಲ ಐದು ತಿಂಗಳಿನಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ವಿಫಲವಾದ ಸರ್ಕಾರವಾಗಿದೆ ಎಂದರು….
ಉದಯ ವಾರ್ತೆ ಧಾರವಾಡ