ಕೈಲಾಗದ ಅಜ್ಜಿಯನ್ನು ಬಿಡದ ಕಾಮುಕ: ಹಾಸಿಗೆ ಹಿಡಿದಿದ್ದ ವೃದ್ಧೆ ಮೇಲೆ ಅತ್ಯಾಚಾರ; ಆರೋಪಿಗೆ 12 ವರ್ಷ ಜೈಲು!

Share to all

ನವದೆಹಲಿ:- ಕಾಲ ಕೆಟ್ಟೋಯ್ತು ಮರ್ರೆ. ಪಾಪ ಕೈಲಾಗದೆ ರೋಗದಿಂದ ಹಾಸಿಗೆ ಹಿಡಿದಿದ್ದ ಅಜ್ಜಿಯನ್ನು ಬಿಟ್ಟಿಲ್ಲ ಕಾಮುಕ.ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಕಿಡಿಗೇಡಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಈ ಮಹತ್ವ ತೀರ್ಪು ಹೊರಹಾಕಿದೆ.

2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಪರಾಧಿಯು ವೃದ್ಧೆಯ ಮನೆಗೆ ಪ್ರವೇಶಿಸಿದಾಗ ಆಕೆ ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದಳು. ಆತ ವೃದ್ಧೆಯನ್ನು ಥಳಿಸಿ, ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆಂಚಲ್ ಅವರು ವೃದ್ಧೆಯ ಸಾಕ್ಷ್ಯವನ್ನು ಗಮನಿಸಿದ್ದು, ಅಂಕಿತ್‌ಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಈ ಘಟನೆಯ ನಂತರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮುಖ, ಕೈ ಮತ್ತು ಎದೆಯ ಮೇಲೆ ಗಾಯಗಳಾಗಿರುವುದು ಕಂಡುಬಂದವು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಇನ್ನು ಅಂಕಿತ್ ಅಲಿಯಾಸ್ ಮೊಗ್ಲಿ ಅತ್ಯಾಚಾರ, ಮನೆ ಅತಿಕ್ರಮಣ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆಯೂ ಇಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು. 85 ವರ್ಷದ ವೃದ್ಧೆಯ ಮೇಲೆ 35 ವರ್ಷದ ಕಿಡಿಗೇಡಿಯೊಬ್ಬ ಬರ್ಬರವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಮೃತಪಟ್ಟಿರುವ ಹೀನಕೃತ್ಯ ಉತ್ತರಪ್ರದೇಶದ ಬರೇಲಿಯ ಹಫೀಜ್‌ಗಂಜ್‌ನಲ್ಲಿ ನಡೆದಿದೆ. 85 ವರ್ಷದ ಮಹಿಳೆಯೊಬ್ಬರು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆಯ ನೆರೆಮನೆಯಲ್ಲಿ ವಾಸಿಸುವ ರಾಕೇಶ್ ಎಂದು ಗುರುತಿಸಲಾದ 35 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Share to all

You May Also Like

More From Author