ಮಂಡ್ಯ: ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಹಣ ಕಳೆದ ಎರಡು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮಾವಣೆಯಾಗಿರಲಿಲ್ಲ. ಇದರಿಂದ ಮನೆ ಯಜಮಾನಿಯರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದರು. ಆದರೆ ಈಗ ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇಂದಿನಿಂದ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಂಡ್ಯದ ಜನಾಂದೋಲನದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಹಣ ಬಂದಿರಲಿಲ್ಲ.
ಇಂದಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆಯಾಗಲಿದೆ. ನುಡಿದಂತೆ ನಡೆಯುವವರು ಕಾಂಗ್ರೆಸ್‌ನವರು. ನಮಗೆ ಸಿಕ್ಕ ಅಧಿಕಾರದಲ್ಲಿ ಜನರಿಗೆ ಒಳ್ಳೆಯದು ಮಾಡುತ್ತೇವೆ. ಬರಗಾಲದಲ್ಲಿ ಪರಿಹಾರ ಕೊಡಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ಆದರೆ ಬಿಜೆಪಿ ಭ್ರಷ್ಟ ಸರ್ಕಾರ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಕಿಡಿಕಾರಿದರು.