ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಹಲವರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್ ಪ್ರಭಾಸ್ ನೆರವಾಗಿದ್ದಾರೆ.
ವಯನಾಡು ಭೂಕುಸಿತ ದುರಂತದ ನಿಮಿತ್ತ ಸಂಕಷ್ಟದಲ್ಲಿರುವವರಿಗೆ ನಟ ಪ್ರಭಾಸ್ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕೇರಳದ ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂ. ನೀಡುವ ಮೂಲಕ ಪ್ರಭಾಸ್ ಮಾನವೀಯತೆ ಮೆರೆದಿದ್ದಾರೆ.
ಅಂದಹಾಗೆ, ವಯನಾಡು ಭೂಕುಸಿತ ದುರಂತ ಹಿನ್ನೆಲೆ ಈಗಾಗಲೇ ರಶ್ಮಿಕಾ ಮಂದಣ್ಣ, ಸೂರ್ಯ ದಂಪತಿ, ಮಮ್ಮುಟ್ಟಿ, ಚಿಯಾನ್ ವಿಕ್ರಮ್, ದುಲ್ಕರ್ ಸಲ್ಮಾನ್, ಅಲ್ಲು ಅರ್ಜುನ್, ಮೆಗಾಸ್ಟಾರ್ ಚಿರಂಜೀವಿ ಕುಟುಂಬ ಸೇರಿದಂತೆ ಅನೇಕರು ಕೇರಳದ ಸಿಎಂ ಫಂಡ್‌ಗೆ ಲಕ್ಷ ಲಕ್ಷ ದೇಣಿಗೆ ನೀಡಿದ್ದಾರೆ.