ಸಿದ್ದರಾಮಯ್ಯ ಭೇಟಿಯಾದ ಬಿಕೆ ಹರಿಪ್ರಸಾದ್: ಪ್ರತ್ಯೇಕ ಕೊಠಡಿಯಲ್ಲಿ ಚರ್ಚೆ

Share to all

ಬೆಂಗಳೂರು: ಹಲವಾರು ದಿನಗಳಿಂದ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಲೇ ಬಂದಿದ್ದ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಇದೀಗ ದಿಢೀರನೆ ಸಿಎಂ ನಿವಾಸಕ್ಕೆ ಆಗಮನಿಸಿ ಸುಮಾರು ಒಂದು ತಾಸು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್​ ಪಾಳಯದಲ್ಲಿ ನಡೆದ ಈ ವಿದ್ಯಮಾನ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಹೌದು ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ವರ್ಷದ ಬಳಿಕ ಉಭಯ ನಾಯಕರು ಮುಖಾಮುಖಿಯಾಗಿ ಸುದೀರ್ಘ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕಳೆದ ವಾರವಷ್ಟೇ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಪಕ್ಷ ಹಾಗೂ ಸರ್ಕಾರದ ಪ್ರಮುಖ ಬೆಳವಣಿಗೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಕೆಸಿ ವೇಣುಗೋಪಾಲ ಹಾಗೂ ಪ್ರಮುಖ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮೈಸೂರಿನಲ್ಲಿ ಶುಕ್ರವಾರ ನಡೆಯಲಿರುವ ಜನಾಂದೋಲನ ಸಮಾವೇಶದ ವಿಚಾರವಾಗಿಯೂ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

 


Share to all

You May Also Like

More From Author