ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

Share to all

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆದು ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇನ್ನು ಈ ಘಟನೆಯಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.

 


Share to all

You May Also Like

More From Author