ತುಮಕೂರು: ತುಮಕೂರಿನಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರು ತಂಗಲು ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಅಗ್ರಹಾರದಲ್ಲಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ಗ್ರಾಮ ನಿವಾಸಿ ರವಿ (40) ಎಮದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಕೆಲಸ ಮಾಡಿಕೊಂಡಿದ್ದ ರವಿ ಅವರನ್ನು ಆತನ ಸ್ನೇಹಿತ ಶಿವಕುಮಾರ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಶಿವಕುಮಾರ್ ಹಾಗೂ ರವಿ ನಡುವೆ ಶೆಡ್‌ನಲ್ಲಿ ಗಲಾಟೆ ನಡೆದಿರುವ ಶಂಕೆ ಇದೆ. ಇಬ್ಬರ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿ ರವಿಯ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ತಲೆಯ ಮೇಲೆ ಹಾಲೋಬ್ರಿಕ್ಸ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ತುಮಕೂರು ಎಎಸ್ಪಿ ಮರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕ ಯಾರೆಂದು ತಿಳಿಯಲು ತನಿಖೆಯನ್ನು ಮುಂದುವರಿಸಿದ್ದಾರೆ.