ಬೆಂಗಳೂರು:- ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್, ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದಿರೋ ಘಟನೆ ನಡೆದಿದೆ. ಏರ್ಪೋರ್ಟ್ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಸಾಗುತ್ತಿದ್ದ KA57F-1794 ನಂಬರ್ನ ಬಿಎಂಟಿಸಿ ವೋಲ್ವೋ ಬಸ್ನಿಂದ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ನಾಲ್ಕು ಬೈಕ್ಗಳು ಹಾಗೂ 4 ಕಾರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದೆ. ಚೂರು ಹೆಚ್ಚು ಕಮ್ಮಿ ಆಗಿದ್ರೆ ಹತ್ತಾರು ವಾಹನ ಸವಾರರ ಪ್ರಾಣ ಹೋಗುತ್ತಿತ್ತು
ಏರ್ಪೋರ್ಟ್ ನಿಂದ ಎಚ್ಎಸ್ಆರ್ ಲೇಔಟ್ ಕಡೆ ಸಂಚಾರ ಮಾಡ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು ಬೈಕ್ ಹಾಗೂ ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ್ದು ಒಬ್ಬ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ. ಅಪಘಾತ ದೃಶ್ಯ ಬಸ್ನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.