ಬೆಳ್ಳಿ ನಿರೀಕ್ಷೆಯಲ್ಲಿದ್ದ ವಿನೇಶ್ ಪೋಗಟ್ʼಗೆ ಬಿಗ್ ಶಾಕ್

Share to all

ಪ್ಯಾರಿಸ್‌ ಒಲಿಂಪಿಕ್ಸ್ ಕ್ರೀಡಾ ಕೂಟದ ಮಹಿಳೆಯರ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದ ವಿನೇಶ್‌ ಫೋಗಟ್‌ರನ್ನು ಹೆಚ್ಚು ತೂಕ ಹಿನ್ನೆಲೆ ಅನರ್ಹಗೊಳಿಸಿದ್ದರು. ಬಳಿಕ ಇದನ್ನು ಪ್ರಶ್ನಿಸಿ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಇದೀಗ ಅರ್ಜಿ ವಿಚಾರಣೆ ನಡೆಸಿದ ಕ್ರೀಡಾ ಮಧ್ಯಸ್ಥಿಕೆ ಕೋರ್ಟ್‌ ಅರ್ಜಿ ವಜಾಗೊಳಿಸಿದ್ದು, ಭಾರತಕ್ಕೆ ಬೆಳ್ಳಿ ಪದಕ ಕೈತಪ್ಪಿದಂತಾಗಿದೆ.

ಪ್ಯಾರಿಸ್​ ಒಲಿಂಪಿಕ್ಸ್​ ಕುಸ್ತಿ ಫೈನಲ್​ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು. ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಒಲಿಂಪಿಕ್ಸ್‌ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿ ಒಲಿಂಪಿಕ್ಸ್​ ಮುಕ್ತಾಯಕ್ಕೂ ಮುನ್ನ ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ 2 ಬಾರಿ ಈ ತೀರ್ಪು ಪ್ರಕಟ ಮುಂದೂಡಿಕೆಯಾಗಿತ್ತು. ಇದೀಗ ಇಂದು ತೀರ್ಪು ಪ್ರಕಟಿಸಿರವ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಪೋಗಟ್‌ ಅರ್ಜಿ ವಜಾಗೊಳಿಸಿದೆ.

ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಶ್ಪತ್ ಸಿಂಘಾನಿಯಾ ಸೇರಿದಂತೆ ವಿನೇಶ್ ಅವರ ವಕೀಲರು ವಿನೇಶ್​ ಪರ ವಾದ ಮಾಡಿದ್ದಾರೆ. ತೂಕ ಹೆಚ್ಚಳವು ದೇಹದ ನೈಸರ್ಗಿಕ ಚೇತರಿಕೆ ಪ್ರಕ್ರಿಯೆಯಿಂದಾಗಿ ಮತ್ತು ದೇಹ ನೋಡಿಕೊಳ್ಳುವುದು ಕ್ರೀಡಾಪಟುವಿನ ಮೂಲಭೂತ ಹಕ್ಕು ಎಂದು ವಾದಿಸಿದ್ದಾರೆ.


Share to all

You May Also Like

More From Author