ಬೆಂಗಳೂರು:- ಕಾಮುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೆಣ್ಣು ಮಕ್ಕಳು ಒಂಟಿ ಆಗಿ ಓಡಾಡುವುದೇ ಕಷ್ಟವಾಗಿದೆ. ಸಿನಿಮಾ ವೀಕ್ಷಣೆಗೆ ಬಂದಿದ್ದ ಯುವತಿಗೆ ಥಿಯೇಟರ್ನಲ್ಲಿಯೇ ಕಿರಾತಕ ತೊಂದರೆ ಕೊಟ್ಟಿದ್ದಾನೆ. ಅಷ್ಟೇ ಅಲ್ಲದೆ ರಾತ್ರಿ 9:30 ರ ಶೋ ಇಂಟರ್ವೆಲ್ನಲ್ಲಿ ಯುವತಿ ವಾಶ್ ರೂಂಗೆ ಹೋಗಿದ್ದಾಳೆ. ಅಲ್ಲಿಯೂ ಈ ದುಷ್ಕರ್ಮಿ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ.
ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಮಹಿಳಾ ಅಭಿಮಾನಿಗೆ ಫಿಲ್ಮಂ ಥಿಯೇಟರ್‌ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಬೆಂಗಳೂರಿನ ಊರ್ವಶಿ ಥಿಯೇಟರ್‌ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. 23 ವರ್ಷದ ಯುವತಿಯೊಬ್ಬಳು ಕಳೆದ ಆಗಸ್ಟ್ 10 ರಂದು ಊರ್ವಶಿ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು. ರಾತ್ರಿ 9:30ರ ಶೋನ ಇಂಟರ್ ವೆಲ್‌ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ. ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ ಹೊರಗೆ ಓಡಿ ಬಂದಿದ್ದಾಳೆ. ಸದ್ಯ ಯುವತಿ ಕೊಟ್ಟ ದೂರಿನನ್ವಯ ಅಪ್ರಾಪ್ತ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.