ಸಿದ್ದರಾಮಯ್ಯಗೆ ಮುಡಾ ಟೆನ್ಷನ್: ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ!

Share to all

ಬೆಂಗಳೂರು:- ಮುಡ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ಟೆನ್ಷನ್ ಶುರುವಾಗಿದ್ದು, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಪ್ರಾಸಿಕ್ಯೂಷನ್​ಗೆ ಅನುಮತಿ ಬೆನ್ನಲ್ಲೇ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಮಾಲೋಚನೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ವಿಶೇಷ ಸಭೆ ಕರೆದಿದ್ದಾರೆ. ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆ ಕರೆದಿರುವುದನ್ನು ಸಚಿವರೂ ದೃಢಪಡಿಸಿದ್ದಾರೆ.

ಸಂಜೆ ಸಿಎಂ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಬರುವಂತೆ ಬುಲಾವ್ ಬಂದಿದೆ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಹೀಗಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸರ್ಕಾರದ ತೀರ್ಮಾನ ಏನಿರಲಿದೆ ಎಂಬುದು ಸಂಜೆ ವೇಳೆಗೆ ಗೊತ್ತಾಗಲಿದೆ.

ಪ್ರಾಸಿಕ್ಯೂಷನ್​​ಗೆ ಅನುಮತಿ ವಿರೋಧಿಸಿ ಸಂಪುಟದಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಇಂದಿನ ಸಂಪುಟ ಸಭೆಗೂ ಸಿಎಂ ಸಿದ್ದರಾಮಯ್ಯ ಗೈರಾಗುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯಪಾಲರ ಕ್ರಮ ವಿರೋಧಿಸಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೂಡ ಸಿದ್ದರಾಮಯ್ಯ ಸಂಪುಟ ಸಭೆಯಿಂದ ಹೊರಗುಳಿದಿದ್ದರು ಎನ್ನಲಾಗಿದೆ.


Share to all

You May Also Like

More From Author