ಕೊಪ್ಪಳ: ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನೂರಾರು ಸಿಬ್ಬಂದಿ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿ, ಮೂರನೇ ಎಲಿಮೆಂಟ್ನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ. ಈ ಮೂಲಕ ಹರಿಯುವ ನೀರನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಆಗಸ್ಟ್ 10 ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ಹೋಗುತ್ತಿತ್ತು. ಕ್ರಸ್ಟಗೇಟ್ 19 ಕೊಚ್ಚಿಕೊಂಡು ಹೋಗಿದ್ದರಿಂದ ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಇದೀಗ ಮೂರನೇ ಎಲಿಮೆಂಟ್ ಕೂಡ ಅಳವಡಿಕೆ ಮಾಡಲಾಗಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಕೊನೆಗೂ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಅವರ ಪ್ಲಾನ್ ಸಕ್ಸಸ್ ಆಗಿದ್ದು, ತಾತ್ಕಾಲಿಕ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಟಿ.ಬಿ ಡ್ಯಾಂ ಕ್ರಸ್ಟ್ ಗೇಟ್ 19 ದುರಸ್ತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಮಾಡಿ ನಿಟ್ಟುಸಿರು ಬಿಡಲಾಗಿತ್ತು.
ಇಂದು 3 ಸ್ಟಾಪ್ ಲಾಗ್ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದೆ. 3 ದಿನ ಸತತ 30 ಗಂಟೆ ಕಾರ್ಯಾಚರಣೆ ಇದಾಗಿದ್ದು, TB ಡ್ಯಾಂ ಅಧಿಕಾರಿಗಳು ಈಗ ಜಲಾಶಯದ ಸಂಪೂರ್ಣ ಹೊರ ಹರಿವು ಬಂದ್ ಮಾಡಿದ್ದಾರೆ. ಟಿ.ಬಿ ಡ್ಯಾಂ ಕ್ರಸ್ಟ್ ಗೇಟ್ 19 ದುರಸ್ತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮೊದಲ ಸ್ಪಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿತ್ತು. ಇಂದು ಎರಡು ಹಾಗೂ ಮೂರನೇ ಸ್ಟಾಪ್ ಲಾಗ್ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದೆ.