ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಒಪ್ಪಿಗೆ ಕೊಟ್ಟಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯರ ಆಪ್ತ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಜ್ಯಪಾಲರ ಮೇಲೆ ರಾಜಕೀಯ ಒತ್ತಡವಿದೆ. ಹೀಗಾಗಿ ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಬಳ್ಳಾರಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.
ಇದೇ ವಿಚಾರ ಇಟ್ಟುಕೊಂಡು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ. ಬಿಜೆಪಿ ಅವರು ಪಾದಯಾತ್ರೆ ಮಾಡಿದ್ರು. ಆದರೆ ಏನು ಪ್ರಯೋಜನ ಆಗಿಲ್ಲ. ಹೀಗಾಗಿ ಪ್ರಾಸಿಕ್ಯೂಷನ್ ಜಾರಿ ಮಾಡಿಸಿದ್ದಾರೆ. ಬಸವರಾಜ ಬೊಮ್ಮಾಯಿ ಇದ್ದಾಗ ಸೈಟ್ ಕೊಟ್ಟುದ್ದು. ಇದು ಬಿಜೆಪಿ ಅವರು ಮಾಡಿದ ಷಡ್ಯಂತ್ರ ಎಂದರು.
ಇನ್ನೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಮುಡಾ 14 ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಒಪ್ಪಿಗೆ ಕೊಟ್ಟಿದಾರೆ. ಇತ್ತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿರುದ್ಧ ಸಚಿವರು ಕೆಂಡಕಾರಿದ್ದಾರೆ.