ಬೆಂಗಳೂರು: ಚಂದ್ರಾಲೇಔಟ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ತಾಯಿ – ಮಗನನ್ನು ಅಪಹರಿಸಿದ್ದಲ್ಲದೆ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ರೌಡಿಶೀಟರ್ಗಳು ಸೇರಿದಂತೆ 9 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜೋಸೆಫ್, ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಾಬುದ್ದೀನ್, ಸ್ವಾತಿ ಸೇರಿದಂತೆ 9 ಜನ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು,
ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್ ಮಾಡಿದ್ದರು. ನಂತರ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಲಾಗಿದೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು.
2 ಲಕ್ಷ ರೂ. ಕೊಡುವಂತೆ ಆರೋಪಿಗಳಿಂದ ಕಿರುಕುಳ ನೀಡಲಾಗಿದೆ. ಇಬ್ಬರ ಬಳಿಯೂ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಸಂಬಂದ 9 ಆರೋಪಿಗಳ ಬಂಧನವಾಗಿದೆ.