ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ನಗರದ ಪ್ರೆಸ್ ಕ್ಲಬ್ನಲ್ಲಿ ನಡೆದಿದೆ. ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ನಾಗಿದ್ದು, ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಕೊಟ್ಟ ಹಿನ್ನಲೆ ಕುರುಬ ಸಂಘ ಸುದ್ದಿಗೋಷ್ಠಿ ಕರೆದಿದ್ದರು.
ಈ ವೇಳೆ ಮಾತನಾಡುವಾಗಲೇ ಕೋಲಾರ ಕುರುಬ ಸಂಘದ ಅಧ್ಯಕ್ಷ ರವಿಚಂದ್ರ ಹೃದಯಾಘಾತದಿಂದ ಚೇರ್ ಮೇಲಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡು ಕುಸಿದು ಬಿದ್ದ ಕೋಲಾರ ಕುರುಬ ಸಂಘದ ಅಧ್ಯಕ್ಷ ರವೀಂದ್ರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ರವಿಚಂದ್ರ ಮೃತಪಟ್ಟಿದ್ದಾರೆ. ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.