ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ: ಬೆಂಕಿ ಹಚ್ಚಿ ಕೊಂದ ಗಂಡ

Share to all

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಪತಿ ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ನಡೆದಿದೆ. ಈ ಘಟನೆ ಎರಡು ಮೂರು ದಿನಗಳ ಹಿಂದೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾವ್ಯ (27) ಮೃತ ಗೃಹಿಣಿ. ಈಕೆಯ ಶವ ಮನೆಯ ಬಾತ್‌ರೂಂನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪತಿ ಶಿವಾನಂದ್ ಅಲಿಯಾಸ್ ದಿಲೀಪ್ ಮೂಲತಃ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಣಿಪುರ ಗ್ರಾಮದವನಾಗಿದ್ದು, ಕೊಲೆಯಾದ ಕಾವ್ಯ ಹೊಳೆನರಸೀಪುರ ತಾಲೂಕು ಮಾವಿನಕೆರೆ ಗ್ರಾಮದವರಾಗಿದ್ದಳು. ಇವರಿಬ್ಬರು ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು.

ಪತಿ ವಿಪರೀತವಾಗಿ ಮದ್ಯಪಾನ ಮಾಡುತ್ತಿದ್ದ. ಇದರಿಂದ ಇಬ್ಬರ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಮನೆಯ ಬಾತ್ ರೂಮ್‌ನಲ್ಲಿ ಪತ್ನಿಯನ್ನು ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಸುಟ್ಟಿರುವ ಆರೋಪಿ ಪತಿಯನ್ನು ದಾಬಸ್ ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕಾವ್ಯ ಫೋನ್ ತೆಗೆಯದ ಹಿನ್ನೆಲೆ ಮನೆಯವರು ಬಂದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.


Share to all

You May Also Like

More From Author