ಬೆಂಗಳೂರು: ಕರ್ನಾಟಕದಲ್ಲಿ ಝೀಕಾ ವೈರಸ್ ಆತಂಕ ಮೂಡಿಸಿರುವ ಹೊತ್ತಲ್ಲೇ ಮೊದಲ ಬಲಿಯಾಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ 73 ವರ್ಷದ ವೃದ್ಧ ಬಲಿಯಾಗಿದ್ದಾರೆ. ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗುಣಮುಖರಾಗಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಝೀಕಾ ವೈರಸ್ ಭೀತಿ ಎದುರಾಗಿದ್ದು, ಇದುವರೆಗೆ 9 ಝೀಕಾ ವೈರಸ್ ಕೇಸ್ ಪತ್ತೆ ಆಗಿವೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6, ಶಿವಮೊಗ್ಗ ಜಿಲ್ಲೆಯಲ್ಲಿ 3, ಝೀಕಾ ವೈರಸ್ ಕೇಸ್ ಪತ್ತೆ ಆಗಿವೆ. ಈ ಬಗ್ಗೆ ಝೀಕಾ ವೈರಸ್ ಸೋಂಕಿತರ ವಿವರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.
ಗರ್ಭಿಣಿಯರು ಹೇಗೆ ಎಚ್ಚರಿಕೆ ವಹಿಸಬೇಕು?
- ಸೊಳ್ಳೆ ನಿವಾರಕಗಳನ್ನು ಬಳಸುವುದು
- ಉದ್ದನೆಯ ತೋಳಿನ ಬಟ್ಟೆಗಳನ್ನು ಧರಿಸುವುದು,
- ಮನೆಯ ಅಕ್ಕ ಪಕ್ಕ ನಿಂತ ನೀರನ್ನು ಕ್ಲೀನ್ ಮಾಡ್ತಾ ಇರುವುದು
- ಗರ್ಭವತಿ ಮಹಿಳೆ ಇರುವ ಕಡೆ ಸೊಳ್ಳೆ ಉತ್ಪತ್ತಿ ತಾಣ ಆಗದಂತೆ ನೋಡಿ ಕೊಳ್ಳುವುದು
- ರಕ್ತ ತಪಾಸಣೆ ಮಾಡಬೇಕು
- 2 ದಿನಕ್ಕಿಂತ ಹೆಚ್ಚು ಜ್ವರ ಕಂಡು ಬಂದ್ರೆ ವೈದ್ಯರ ಬಳಿ ತಪಾಸಣೆ ಮಾಡಿ ಕೊಳ್ಳಬೇಕು
ಜಿಕಾ ವೈರಸ್ ಗುಣಲಕ್ಷಣಗಳು?
- ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು),
- ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು
- ಬಹುತೇಕರಲ್ಲಿ ಜಿಕಾ ರೋಗ ಲಕ್ಷಣಗಳು ಕಂಡುಬರುವುದಿಲ್ಲ
- ಸಾಮಾನ್ಯವಾಗಿ ರೋಗದ ಲಕ್ಷಣಗಳು 2-7 ದಿನಗಳವರೆಗೆ ಇರುತ್ತದೆ
- ಈಡಿಸ್ ಸೊಳ್ಳೆಗಳು ಕಚ್ಚುವಿಕೆಯಿಂದ ಪಾರಾಗಲು ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು
- ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು
- ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು
- ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು
- ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು.
- ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು