2025 ರ IPL ನಲ್ಲಿ RCB ಪರ ಆಡಲು ಇಂಗಿತ ವ್ಯಕ್ತಪಡಿಸಿದ ರಿಂಕು ಸಿಂಗ್!

Share to all

ಐಪಿಎಲ್​ ತಂಡಗಳು ರಿಟೇನ್​ ಬಗ್ಗೆ ತಲೆಕೆಡಿಸಿಕೊಂಡಿದ್ದರೆ, ಇತ್ತ ಆಟಗಾರರೂ ಕೂಡ ಹಲವು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಒಂದು ವೇಳೆ ನಾವಿರುವ ತಂಡ ನಮ್ಮನ್ನ ಉಳಿಸಿಕೊಳ್ಳದಿದ್ದರೆ ಯಾವ ತಂಡವನ್ನು ಸೇರಿಕೊಳ್ಳಬಹುದು ಎಂಬ ಯೋಚನೆಯಲ್ಲಿ ಹಲವರಿದ್ದಾರೆ. ಆದ್ರೆ ಇದು ಎಲ್ಲರಿಗೂ ಸಾಧ್ಯವಿಲ್ಲ, ಯಾಕಂದ್ರೆ ಹರಾಜಿನಲ್ಲಿ ಬಿಡ್ ಮಾಡಿ ಖರೀದಿಸಿದ ತಂಡದ ಪರವೇ ಆಡ ಬೇಕಾಗುತ್ತದೆ. 2024ರ ಐಪಿಎಲ್ ಟ್ರೋಫಿ ಗೆದ್ದ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡದ ಸ್ಫೋಟಕ ಆಟಗಾರರ ಒಂದು ವೇಳೆ ಕೆಕೆಆರ್​ ತಂಡ ತನ್ನನ್ನು ಉಳಿಸಿಕೊಳ್ಳದಿದ್ದರೆ ನಾನು ಆರ್​ಸಿಬಿ ಪರ ಆಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿ ಬೃಹತ್ ಮೊತ್ತ ನೀಡಿ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಇಲ್ಲದಿದ್ದರೆ ರಿಂಕು ಸಿಂಗ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗೆ ಹರಾಜಿಗೆ ಎಂಟ್ರಿಯಾದರೆ ರಿಂಕು ಖರೀದಿಗೆ ಆರ್​ಸಿಬಿ ಮುಂದಾಗುವುದರಲ್ಲಿ ಅನುಮಾನವೇ ಇಲ್ಲ.

ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ನಾಲ್ವರನ್ನು ನೇರವಾಗಿ ರಿಟೈನ್ ಮಾಡಿಕೊಳ್ಳಬಹುದು. ಇನ್ನುಳಿದ ಇಬ್ಬರು ಆಟಗಾರರನ್ನು ಆರ್​ಟಿಎಂ ಕಾರ್ಡ್​ ಬಳಸಿ ಹರಾಜಿಗೆ ಬಿಡುಗಡೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಂದ 19 ಆಟಗಾರರು ಹೊರಬೀಳುವುದು ಖಚಿತ.

ಹೀಗಾಗಿಯೇ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ನಿಮ್ಮನ್ನು ರಿಟೈನ್ ಮಾಡಿಕೊಳ್ಳದಿದ್ದರೆ ಯಾವ ತಂಡದ ಪರ ಕಣಕ್ಕಿಳಿಯುತ್ತೀರಿ ಎಂಬ ಪ್ರಶ್ನೆಯನ್ನು ರಿಂಕು ಸಿಂಗ್ ಅವರಲ್ಲಿ ಕೇಳಲಾಗಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಕೆಕೆಆರ್ ದಾಂಡಿಗ ನೀಡಿದ ನೇರ ಉತ್ತರ- RCB.

ಹೌದು, ಕೆಕೆಆರ್ ತಂಡವು ನನ್ನನ್ನು ರಿಟೈನ್ ಮಾಡದಿದ್ದರೆ, ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವುದನ್ನು ಎದುರು ನೋಡುತ್ತಿದ್ದೇನೆ. ನನಗೆ ಆರ್​ಸಿಬಿ ಪರ ಆಡಬೇಕೆಂಬ ಆಸೆಯಿದೆ ಎಂದು ರಿಂಕು ಸಿಂಗ್ ಸ್ಪೋರ್ಟ್ಸ್​ ತಕ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಬೆನ್ನೆಲುಬಾಗಿರುವ ರಿಂಕು ಸಿಂಗ್ ಅವರನ್ನು ಕೆಕೆಆರ್ ರಿಲೀಸ್ ಮಾಡಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ 2018 ರಿಂದ ರಿಂಕು ಸಿಂಗ್ ಕೆಕೆಆರ್ ಪರ ಆಡುತ್ತಿದ್ದಾರೆ. ಅಲ್ಲದೆ ಕಳೆದ ಮೂರು ಹರಾಜಿನ ವೇಳೆಯೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅವರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗಾಗಿ ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಇದಾಗ್ಯೂ ರಿಂಕು ಸಿಂಗ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಂದರೆ ಅವರ ಖರೀದಿಗೆ ಇತರೆ ಫ್ರಾಂಚೈಸಿಗಳು ಮುಗಿಬೀಳುವುದರಲ್ಲಿ ಅನುಮಾನವೇ ಇಲ್ಲ. ಆದರೆ ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಬೇಕೆಂಬ ಆಸೆಯನ್ನು ರಿಂಕು ಸಿಂಗ್ ಬಹಿರಂಗಪಡಿಸಿದ್ದಾರೆ. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ರಿಂಕು ಕಾಣಿಸಿಕೊಂಡರೆ ಆರ್​ಸಿಬಿ ಫ್ರಾಂಚೈಸಿ ಅವರ ಖರೀದಿಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ದಿಟ


Share to all

You May Also Like

More From Author