ಮಂಡ್ಯ:- ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರಿಂದ ಕೊಲೆಗಳು ನಡೆಯುತ್ತಿದೆ. ಅದರಂತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಂಥನಹಳ್ಳಿಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಜಯರಾಮು ಎಂಬಾತ ತನ್ನ 38 ವರ್ಷದ ತೇಜಸ್ವಿನಿ ಕೊಲೆ ಮಾಡಿದ ಪಾಪಿ. ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.
ತೇಜಸ್ವಿನಿ ಕುತ್ತಿಗೆಗೆ ಜಯರಾಮು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಬಳಿಕ ಕೊಡಲಿಯಿಂದ ತಲೆ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತೇಜಸ್ವಿನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.