ತಮಿಳು ನಟ ವಿಜಯ್ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಅದರ ಭಾಗವಾಗಿ ಇಂದು ಪಕ್ಷದ ಚಿಹ್ನೆಯನ್ನು ಬಿಡುಗಡೆ ಮಾಡಿದರು. ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು.
ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಯಾವುದೇ ಮೈತ್ರಿ ಅಥವಾ ಪಕ್ಷವನ್ನು ಬೆಂಬಲಿಸಲಿಲ್ಲ.
ಮತ್ತೊಂದೆಡೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಕಳೆದ ಮೂರು ವರ್ಷಗಳಲ್ಲಿ ರಾಜ್ಯವು 9.74 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ, ಇದು 31 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ಹೇಳಿದರು. ತಮಿಳುನಾಡಿನಲ್ಲಿ 68,773 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಸ್ಟಾಲಿನ್, ಈ ಯೋಜನೆಗಳು ಸುಮಾರು ಒಂದು ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುವ ನಿರೀಕ್ಷೆಯಿದೆ ಎಂದು ಹೇಳಿದರು.