ಶಾಸಕ ಪ್ರಸಾದ ಅಬ್ಬಯ್ಯಗೆ KRDL ನಿಗಮ ನೀಡುವಂತೆ ಒತ್ತಾಯಿಸಿ ,ಛಲವಾದಿ ಸಮಾಜದಿಂದ ಬೆಂಗಳೂರ ಚಲೋ…

Share to all

ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಕ್ಯಾಬಿನೆಟ್ ದರ್ಜೆಯ ನಿಗಮ ಮಂಡಳಿಗೆ ನೇಮಕ ಮಾಡುವಂತೆ ಒತ್ತಾಯಿಸಿ ಛಲವಾದಿ ಸಮಾಜದ ಜನ ಬೆಂಗಳೂರ ಚಲೋ ಆರಂಬಿಸಿದರು.

ಇಂದು ರಾಜ್ಯದ ನಾನಾ ಭಾಗಗಳಿಂದ ಛಲವಾದಿ ಸಮಾಜದವರು ಬಸ್ಸಗಳ ಮುಖಾಂತರ ಬೆಂಗಳೂರು ಚಲೋ ನಡಿಸಿದ್ದಾರೆ.ಶಾಸಕ ಪ್ರಸಾದ ಅಬ್ಬಯ್ಯಗೆ KRDL ನಿಗಮ ಮಂಡಳಿಯೇ ನೀಡಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಇಂದು ಬೆಂಗಳೂರು ಕಡೆ ಪ್ರಯಾಣ ಬೆಳೆಸಿದರು.ಗದಗ,ಹಾವೇರಿ ಹಾಗೂ ಹುಬ್ಬಳ್ಳಿಯಿಂದ ಸಾವಿರಾರು ಜನರು ಬೆಂಗಳೂರಿಗೆ ಹೊರಟಿದ್ದು ಇಂದು ಬೆಂಗಳೂರಿನಲ್ಲಿ ಸಿಎಂ ಡಿಸಿಎಂ ಹಾಗೂ ಗ್ರಹ ಸಚಿವರನ್ನು ಭೇಟಿಯಾಗಿ ಶಾಸಕ ಪ್ರಸಾದ ಅಬ್ಬಯ್ಯಗೆ ನಿಗಮ ಮಂಡಳಿಯ ಅದ್ಯಕ್ಷ ಸ್ಥಾನ ನೀಡಬೇಕೆಂದು ಮನವಿ ಸಲ್ಲಿಸಲಿದ್ದಾರೆ.

ಉದಯ ವಾರ್ತೆ ಹುಬ್ಬಳ್ಳಿ


Share to all

You May Also Like

More From Author