ರಾಜಾತಿಥ್ಯ ವಿಚಾರ: ದರ್ಶನ್ʼನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ – ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

Share to all

ಬೆಂಗಳೂರು: ನಟ ದರ್ಶನ್​​ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ಕೂಡಲೆ ದರ್ಶನ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಟ್ವೀಟ್​​ ಮಾಡಿದ ಸಿಎಂ ಸಿದ್ದರಾಮಯ್ಯ, “ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು,

ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್​ ಮಾಡಿದ್ದಾರೆ.

 


Share to all

You May Also Like

More From Author