ಉಡುಪಿ:- ಕಾರ್ಕಳ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿ ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್ಗೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತನನ್ನು ಅರೆಸ್ಟ್ ಮಾಡಿದ್ದಾರೆ.
ಲವ್ ಜಿಹಾದ್ ಎಂದು ಆರೋಪಿಸಿದ್ದ ಬಿಜೆಪಿ, ಹಿಂದೂ ಸಂಘಟನೆಗಳಿಗೆ ಅಭಯ್ ಬಂಧನ ಮುಖ ಭಂಗ ತಂದಿದೆ. ಬಂಧಿತ ಆರೋಪಿ ಅಭಯ್ ಎನ್ನಲಾಗಿದೆ. ಅಭಯ್ ಅತ್ಯಾಚಾರಿ ಅಲ್ತಾಫ್ಗೆ ಡ್ರಗ್ಸ್ ತಂದು ಕೊಟ್ಟಿದ್ದ ಎಂದು ತಿಳಿದುಬಂದಿದೆ.
ಜಿಲ್ಲೆಯ ಕಾರ್ಕಳದಲ್ಲಿ ಡ್ರಗ್ಸ್ ಬೆರೆಸಿದ ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ 3ನೇ ಆರೋಪಿ ಅಭಯ್ನನ್ನು ಪೊಲೀಸರು ಬಂಧಿಸಿದ್ದು ಹೊಸ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿ ಅಭಯ್ ಫೇಸ್ಬುಕ್ನಲ್ಲಿ MLA ಸುನೀಲ್ಕುಮಾರ್ ಫೋಟೋ ಹಾಕಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದಾನೆ.
ಇತ್ತೀಚೆಗೆ ಈ ಪ್ರಕರಣಕ್ಕೆ ಬಿಜೆಪಿ, ಹಿಂದೂ ಸಂಘಟನೆಗಳು ಲವ್ ಜಿಹಾದ್ ಹಣೆಪಟ್ಟಿ ಕಟ್ಟಿದ್ದರು. ಆದರೆ ಇದೀಗ ತಮ್ಮದೇ ಕಾರ್ಯಕರ್ತ ಈ ಪ್ರಕರಣದಲ್ಲಿ ಭಾಗಿಯಾಗಿರೋದು ಮುಖಭಂಗವಾಗಿದೆ.