ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಕಳೆದ ಎರಡು ತಿಂಗಳಿಂದ ಜೈಲಿನಲ್ಲಿರುವ ದರ್ಶನ್ ಜೈಲೂಟ ಸೇರ್ತಿಲ್ಲ, ತಿನ್ನೋಕೆ ಆಗದೇ ಸಣ್ಣ ಆಗಿದ್ದೀನಿ ಎಂದೆಲ್ಲ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಿದ್ರು. ಆದ್ರೆ ಅದೆಲ್ಲವೂ ಬರೀ ನಾಟಕನಾ ಅನ್ನೋ ಅನುಮಾನ ಈಗ ಮೂಡ್ತಿದೆ. ಜೈಲು ಅಧಿಕಾರಿಗಳು ನಟ ದರ್ಶನ್ಗೆ ಬಹುತೇಕ ಡೇ ಒನ್ ನಿಂದಲೂ ಮನೆ ಊಟ, ಸಿಗರೇಟ್, ಟೀ, ಸೇರಿದಂತೆ ಐಷಾರಾಮಿ ಸವಲತ್ತು ನೀಡ್ತಿದ್ದಾರಾ ಎಂಬ ಸಂಶಯ ಈ ಫೋಟೋದಿಂದ ಮೂಡಿದೆ.
ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ ಎ1 ದರ್ಶನ್ ಆಗಿದ್ದಾರೆ. ಈ ಮೂರು ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಮೂರು ವಿಶೇಷ ತಂಡ ರಚನೆ ಮಾಡಿದ್ದಾರೆ.
ಬೇಗೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಅವರಿಂದ ಮೊದಲನೇ ಪ್ರಕರಣದ ತನಿಖೆ ನಡೆಯುತ್ತದೆ. ಜೈಲಿನ ಲಾನ್ನಲ್ಲಿ ಕುಳಿತು ಕಾಫಿ ಸಿಗರೇಟ್ ಸೇವನೆ, ರೌಡಿಶೀಟರ್ಗಳ ಜೊತೆ ದರ್ಶನ್ ಬೇರೆತಿದ್ದು ಹೇಗೆ? ಲಾನ್ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಹೇಗೆ ಬಂತು? ಹಾಗೂ ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧವಿದ್ದರೂ, ಹೇಗೆ ಒಳಗೆ ಬಂತು ಅಂತ ತನಿಖೆ ನಡೆಸುತ್ತಾರೆ.
ಎರಡನೇ ಪ್ರಕರಣ: ಮೊಬೈಲ್ ಫೋನ್ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ಹುಳಿಮಾವು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ತನಿಖೆ ನಡೆಸುತ್ತಾರೆ. ಫೋಟೋ ತೆಗೆದಿದ್ದು ಹಾಗೂ ವಿಡಿಯೋ ಕರೆ ಮಾಡಿದ್ದು ಯಾರು? ಜೈಲಿನಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ, ಆರೋಪಿಗಳ ಕೈಗೆ ಮೊಬೈಲ್ ಸಿಕ್ಕಿದ್ದು ಹೇಗೆ.?
ಒದಗಿಸಿದವರು ಯಾರು, ನೆಟ್ ಕನೆಕ್ಷನ್ ಹೇಗೆ ಬಂತು ಎಂಬೆಲ್ಲ ತನಿಖೆ ನಡಯುತ್ತದೆ. ಹೊರಗಡೆಯಿಂದ ಜೈಲಿನೊಳಗೆ ವಿಡಿಯೋ ಕರೆ ಮಾಡಿರುವ ಬಗ್ಗೆಯೂ ತನಿಖೆ ನಡೆಯಲಿದೆ. ಜೈಲು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ದಾಖಲಾಗಿರುವ ಮೂರನೇ ಪ್ರಕರಣವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ್ ನೇತೃತ್ಚದ ತಂಡ ತನಿಖೆ ನಡೆಸುತ್ತದೆ.