ಪ್ರತಿಷ್ಠಿತ ಮಹಿಳಾ ಟಿ20 ವಿಶ್ವಕಪ್ ತಂಡ ಪ್ರಕಟ: ಫಿಟ್​ನೆಸ್​ ಪಾಸ್​ ಆದರೆ ಕನ್ನಡತಿ ಶ್ರೇಯಾಂಕಾಗೆ ಚಾನ್ಸ್!

Share to all

ಪ್ರತಿಷ್ಠಿತ ಮಹಿಳಾ ಟಿ20 ವಿಶ್ವಕಪ್ ತಂಡ ಪ್ರಕಟವಾಗಿದ್ದು, ಫಿಟ್​ನೆಸ್​ ಪಾಸ್​ ಆದರೆ ಕನ್ನಡತಿ ಶ್ರೇಯಾಂಕಾಗೆ ಚಾನ್ಸ್ ಸಿಗಲಿದೆ. ಒಂಬತ್ತನೇ ಆವೃತ್ತಿಯ ಈ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಅಕ್ಟೋಬರ್ 3 ರಿಂದ 20 ರವರೆಗೆ ದುಬೈ ಮತ್ತು ಶಾರ್ಜಾದಲ್ಲಿ ನಡೆಯಲಿದೆ.

ತಂಡವನ್ನು ಹರ್ಮನ್​ಪ್ರೀತ್​ ಕೌರ್​ ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಉಳಿದಂತೆ ತಂಡದಲ್ಲಿ ಶಫಾಲಿ ವರ್ಮಾ, ರಿಚಾ ಘೋಷ್ ಮತ್ತು ರೇಣುಕಾ ಸಿಂಗ್, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್​ ಪ್ರಮುಖ ಆಟಗಾರ್ತಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ತೋರಿದ್ದ ಲೆಗ್ ಸ್ಪಿನ್ನರ್ ಆಶಾ ಶೋಭನಾ ಕೂಡ ಸ್ಥಾನ ಪಡೆದಿದ್ದಾರೆ

ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ. ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ಮಹಿಳಾ ತಂಡ ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ.

ಗಾಯದಿಂದ ಚೇತರಿಕೆ ಕಾಣುತ್ತಿರುವ ಕನ್ನಡತಿ ಶ್ರೇಯಾಂಕ ಪಾಟೀಲ್ ಮತ್ತು ಯಾಸ್ತಿಕಾ ಭಾಟಿಯಾ ಅವರ ಲಭ್ಯತೆಯು ಫಿಟ್‌ನೆಸ್ ಸ್ಥಿತಿಯನ್ನು ಅವಲಂಬಿಸಿರುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಒಂದೊಮ್ಮೆ ಇವರು ಫಿಟ್​ ಆದರೆ ತಂಡದಲ್ಲಿ ಅವಕಾಶ ಪಡೆಯಬಹುದಾಗಿದೆ.


Share to all

You May Also Like

More From Author