ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ವಿಚಾರ ಹಿನ್ನೆಲೆಯಲ್ಲಿ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹೀಗಾಗಿ ದರ್ಶನ್ರನ್ನ ಬೆಂಗಳೂರು ಸೆಂಟ್ರಲ್ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ ಅನ್ನೋ ಆರೋಪಕ್ಕೆ ನಟಿ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.
ವಿವೇಚನೆ ಇಟ್ಟುಕೊಂಡು ಮಾತನಾಡೋಣ. ಜೈಲಿನಲ್ಲಿಯಾರು ಇರುತ್ತಾರೆ. ಜೈಲಿನಲ್ಲಿ ಇರುವುದೇ ಕ್ರಿಮಿನಲ್ಸ್ ಅಲ್ವಾ? ಎಂದು ಹೇಳಿದ್ದಾರೆ.ಅಲ್ಲಿ ಓಡಾಟ ನಡೆಸೋಕೆ ಯಾರು ಸಿಗುತ್ತಾರೆ. ಯಾವುದಾದ್ರೂ ಒಂದು ತಪ್ಪು ಮಾಡಿದವರೇ ಅಲ್ವಾ ಜೈಲಿಗೆ ಹೋಗೋದು ಎಂದು ದರ್ಶನ್‌ರನ್ನು ಸಮರ್ಥಿಸಿಕೊಂಡು ಸುಮಲತಾ ಮಾತನಾಡಿದ್ದಾರೆ.
ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು. ಇದರಲ್ಲಿ ಭಾಗಿಯಾದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರು ಕ್ರಮ ತೆಗೆದುಕೊಳ್ತಾರೆ. ತನಿಖೆ ನಡೆಯುತ್ತಿದೆ ದರ್ಶನ್ ಈಗ ಆರೋಪಿ ಸ್ಥಾನದಲ್ಲಿದ್ದಾರೆ. ಜೈಲಿನಲ್ಲಿ ಉಳಿದವರನ್ನ ಬಿಟ್ಟು ದರ್ಶನ್‌ರನ್ನೇ ಹೈಲೆಟ್ ಮಾಡುತ್ತಿದ್ದಾರೆ ಎಂದು ನಟಿ ಬೇಸರ ವ್ಯಕ್ತಪಡಿಸಿದ್ದಾರೆ.