ಬೆಂಗಳೂರು:- ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಭೀಕರ ಕೊಲೆ ನಡೆದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ರಾಮಕೃಷ್ಣ ಎಂಬುವರನ್ನು ತುಮಕೂರಿನ ಮಧುಗಿರಿ ನಿವಾಸಿ ರಮೇಶ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಕೊಲೆಯಾದ ರಾಮಕೃಷ್ಣ ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದರು. ಇಂದು ಬಿಎಂಟಿಸಿ ಬಸ್ ನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್, ರಾಮಕೃಷ್ಣ ಜೊತೆ ಜಗಳವಾಡಿದ್ದಾನೆ. ನಂತರ ಚಾಕು ತೆಗೆದು ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ರಾಮಕೃಷ್ಣ ಮೃತಪಟ್ಟಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.